Telegram Join My Telegram WhatsApp Join My WhatsApp

ಉದ್ಯೋಗಾಕಾಂಕ್ಷಿಗಳಿಗೆ 5 ವರ್ಷ ವಯೋಸಡಿಲಿಕೆ.

ಸರ್ಕಾರ ವಯೋಮಿತಿ ಮೀರುತ್ತಿರುವ ಉದ್ಯೋಗಿಗಳಿಗೆ ಸಮಾಧಾನದ ಸುದ್ದಿ ನೀಡಲು ಮುಂದಾಗಿದೆ. ಕೋವಿಡ್ ನೈನ್ ಮತ್ತು ನೇಮಕ ವಿಳಂಬದ ಕಾರಣದಿಂದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಎಲ್ಲ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಹೆಚ್ಚುವರಿ ಸಡಿಲಿಕೆ ನೀಡಿ ಆದೇಶ ಹೊರಡಿಸಿತ್ತು. 

ಈಗ ಈ ಪ್ರಮಾಣವನ್ನು 2 ವರ್ಷ ಹೆಚ್ಚಿಸಲು ಉದ್ದೇಶಿಸಿದೆ. ಅಂದಹಾಗೆ ಹುದ್ದೆಗಳಿಗೆ ಅನುಗುಣವಾಗಿ ಬದಲಾವಣೆ ಇರಲಿದೆ. ಕೆಲವು ನಿರ್ದಿಷ್ಟ ಹುದ್ದೆಗಳಿಗೆ ಉದಾಹರಣೆಗೆ ಪೊಲೀಸ್ ಇಲಾಖೆ, ಕಾನ್ಸ್‌ಟೇಬಲ್ ಹುದ್ದೆಗಳಿಗೆ ವಯೋಮಿತಿ ಕಡಿಮೆ ಇರುತ್ತದೆ. ಆದರೆ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಈ ಸಾಮಾನ್ಯ ನಿಯಮಗಳ ಅನ್ವಯವಾಗುತ್ತದೆ. 

ಒಳಮೀಸಲಾತಿ ಕಾರಣದಿಂದ ನೇಮಕ ಪ್ರಕ್ರಿಯೆ ತಕ್ಷಣಕ್ಕೆ ಆರಂಭವಾಗುವ ಲಕ್ಷಣ ಇಲ್ಲದ ಕಾರಣ ಉದ್ಯೋಗಕಾಂಕ್ಷಿಗಳು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಲಕ್ಷಾಂತರ ಉದ್ಯೋಗಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. 

2-3 ವರ್ಷಗಳಿಂದ ಕೆಪಿಎಸ್‌ಸಿ ಪೊಲೀಸ್ ಶಿಕ್ಷಣ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ದೊಡ್ಡ ಸಂಖ್ಯೆಯಲ್ಲಿ ಇದ್ದು, ಅವುಗಳ ಭರ್ತಿ ಪ್ರಕ್ರಿಯೆ ಕೂಡಲೇ ಆರಂಭಿಸಬೇಕೆಂದು ಅವರ ಆಗ್ರಹವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಅಭಿಯಾನ ತೀವ್ರಗೊಂಡಿದೆ. ಅಧಿವೇಶನದಲ್ಲಿ ಈ ವಿಷಯ ಪ್ರತಿಧ್ವನಿಸುವ ಸಾಧ್ಯತೆ ಇದ್ದು, ವಿರೋಧ ಪಕ್ಷಗಳು ಈ ವಿಚಾರ ಕೈಗೆತ್ತಿಕೊಳ್ಳಲು ಮುಂದಾಗಿದೆ. 

ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಇಳಿದಿರುವ ಉದ್ಯೋಗಾಂಕ್ಷಿಗಳು ವಯೋಮಿತಿಯನ್ನು 5 ವರ್ಷ ಸಡಿಲಿಕೆ ಮಾಡಬೇಕು ಎಂದು ಒತ್ತಾಯಿಸಿದರು.ಇದರ ಬೆನ್ನಲ್ಲೇ ಸೆಪ್ಟೆಂಬರ್ ನಲ್ಲಿ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್-6   2 ವರ್ಷ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಮಾಡಿತ್ತು. ಇದರ ಬಗ್ಗೆಯೂ ವಿರೋಧ ಮುಂದುವರಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29 ರಂದು ಪರಿಷ್ಕೃತ ಆದೇಶ ಹೊರಡಿಸಿದ್ದ ಸರ್ಕಾರ 2025 ರಿಂದ ಡಿಸೆಂಬರ್ 27, 2027 ರ ವರೆಗಿನ ಅಧಿಸೂಚನೆಗಳಿಗೆ ಅನ್ವಯಿಸುವಂತೆ 3 ವರ್ಷ ವಯೋಮಿತಿಯನ್ನು ಸಲ್ಲಿಸಿತ್ತು. ಆದರೆ ಎಸ್‌ಸಿ ಒಳಮೀಸಲಾತಿ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇಕಡ 50 ಕ್ಕೆ ಸೀಮಿತಗೊಳಿಸಬೇಕೆ ಅಥವಾ ಶೇಕಡಾ 56 ಮೀಸಲಾತಿ ನೀಡಬಹುದೇ ಎಂಬುದು ಸಹ ನ್ಯಾಯಾಲಯದಲ್ಲಿಇತ್ಯರ್ಥವಾಗಿಲ್ಲ. 

ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿತ್ತು. ಸಾವಿರಾರು ಮಂದಿ ವಯೋಮಿತಿ ಕಾರಣಕ್ಕಾಗಿಯೇ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿವಿಲ್ ಸೇವೆಗಳಿಗೆ ನೇರ ನೇಮಕಾತಿ ಆಯಾ ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯಿಸುವಂತೆ 5 ವರ್ಷಗಳವರೆಗೆ ಸಡಿಲಿಕೆ ಮಾಡಲು ಗುರುವಾರ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ.

ಸಚಿವ ಸಂಪುಟ ಸಭೆಯಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದರೆ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲ ವರ್ಗಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ನಿರ್ಧಾರದಿಂದಾಗಿ ವಯಸ್ಸಿನ ಕಾರಣದಿಂದ ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿದಿರುವ ಆತಂಕದಲ್ಲಿದ್ದ ಲಕ್ಷಾಂತರ ಅಭ್ಯರ್ಥಿಗಳು ನಿರಾಳರಾಗಲಿದ್ದಾರೆ ಎಂದು ತಿಳಿದು ಬಂದಿದೆ.