Telegram Join My Telegram WhatsApp Join My WhatsApp

ಕುಂಭಮೇಳದಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರ್ಬಂಧ? ಉತ್ತರಾಖಂಡ ಸಿಎಂ ಹೇಳಿದ್ದೇನು?

ಹರಿದ್ವಾರದ ಶ್ರೀ ಗಂಗಾ ಸಭಾ ಅಧ್ಯಕ್ಷ ನಿತಿನ್ ಗೌತಮ್ ಅವರು ಕುಂಭಮೇಳ ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. 1935 ರ ಪುರಸಭೆ ಕಾಯ್ದೆಗಳ ಪ್ರಕಾರ ಹರ್ ಕಿ ಪೌರಿ ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ, ಈ ಪ್ರಸ್ತಾವವನ್ನು ಜಾರಿಗೊಳಿಸುವುದು ಕಷ್ಟಸಾಧ್ಯ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಪ್ರವಾಸೋದ್ಯಮಕ್ಕೆ ಇದರಿಂದ ತೊಂದರೆಯಾಗಬಹುದು ಎಂಬುದು ಅವರ ಅಭಿಪ್ರಾಯ.