Telegram Join My Telegram WhatsApp Join My WhatsApp

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ : ಸುಪ್ರೀಂಕೋರ್ಟ್ ಆದೇಶ.

ಖಾಸಗಿ ಮತ್ತು ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಜೈವಿಕ ಮುಟ್ಟಿನ ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಜೊತೆಗೆ ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಒಂದು ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಸುಪ್ರೀಂಕೋರ್ಟ್‌ನ ಆದೇಶದಲ್ಲಿ ಏನಿದೆ? 

  • ಎಲ್ಲ ಸರ್ಕಾರಿ ಖಾಸಗಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಜೈವಿಕ ಸ್ಯಾನಿಟರಿ ಪ್ಯಾಡ್ ವಿತರಣೆ ಕಡ್ಡಾಯ.
  • ಶಾಲೆಗಳಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು.
  • ಈ ನಿಯಮಗಳನ್ನು ಪಾಲಿಸದ ಶಾಲೆಗಳ ಮಾನ್ಯತೆ ರದ್ದು. 
  • ಈ ಸೌಕರ್ಯದ ಲಭ್ಯತೆಯನ್ನ ಆಯಾ ರಾಜ್ಯ ಸರ್ಕಾರಗಳು ಖಚಿತಪಡಿಸಬೇಕು. ಮತ್ತು ಇಲ್ಲದಿದ್ದರೆ ಸರ್ಕಾರಗಳು ಹೊಣೆಯಾಗುತ್ತವೆ.