Telegram Join My Telegram WhatsApp Join My WhatsApp

17 ನೇ ಬಜೆಟ್ ಗೆ ಸಿದ್ದು ಸಿದ್ಧತೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ಹಣಕಾಸು ಇಲಾಖೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಮೊದಲ ಸಭೆ ನಡೆಸಿದ್ದಾರೆ. ನಂತರ ಸಿದ್ದರಾಮಯ್ಯ ಅವರು ಇಲಾಖಾವಾರು ಸಭೆ, ರೈತರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರವಾರು ತಜ್ಞರ ಜೊತೆ ಸಭೆ ನಡೆಸಿದ್ದಾರೆ.

ಇವರು 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. ಈಗಾಗಿ ಮಾರ್ಚ್ ಮೊದಲ ವಾರದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.

ಅಧಿವೇಶನದ ಬಳಿಕ ಪೂರ್ಣ ಸಿದ್ಧತೆ :

ಬಜೆಟ್ ಸಿದ್ಧತೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನವರಿ 22 ರಿಂದ ಜಂಟಿ ಅಧಿವೇಶನ ಮನರೇಗ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನ ಮುಗಿದ ಕೂಡಲೇ ಬಜೆಟ್ ಮಂಡನೆಗೆ ಸಿದ್ಧತೆ ಪೂರ್ಣ ಪ್ರಮಾಣದಲ್ಲಿ ಶುರುವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ 17 ನೇ ಬಜೆಟ್ : 

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದಾಖಲಾಯಾ 16 ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ್ದ ರಾಮಕೃಷ್ಣ ಹೆಗಡೆ ದಾಖಲೆ  2023 ರ ಜೂನ್‌ನಲ್ಲಿ ಸಿದ್ದರಾಮಯ್ಯ ಮುರಿದಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಬಜೆಟ್ ಅಧಿವೇಶನ ಬಜೆಟ್ ಆಗಲಿದೆ.

ದೇಶದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿರುವ ಗುಜರಾತ್‌ನ ವಜುಬಾಯಿ ವಾಲಾ ಅವರ ದಾಖಲೇ ಸರಿಗಟ್ಟಲು ಮತ್ತೊಂದು ಬಜೆಟ್ ಮಂಡನೆ ಮಾಡಬೇಕಾದ ಅನಿವಾರ್ಯತೆ ಇದೆ. ಇನ್ನು 2026-27 ನೇ ಸಾಲಿನ ಕೇಂದ್ರ ಬಜೆಟ್ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಬ್ಬರು ಒಂದು ಬಾನುವಾರ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. 

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು 17 ನೇ ರಾಜ್ಯ ಬಜೆಟ್ ಅನ್ನು ಮಂಡಿಸಲು ಸಿದ್ಧರಾಗಿದ್ದಾರೆ. ಈ ಬಜೆಟ್‌ನ್ನು ರಾಜ್ಯದ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ.

ಬಜೆಟ್‌ನ ಪ್ರಮುಖ ನಿರೀಕ್ಷಿತ ಅಂಶಗಳು :

  1. ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ

    • ಗೃಹಲಕ್ಷ್ಮಿ

    • ಗೃಹಜ್ಯೋತಿ

    • ಅನ್ನಭಾಗ್ಯ

    • ಯುವನಿಧಿ

    • ಶಕ್ತಿ ಯೋಜನೆ
      ಈ ಯೋಜನೆಗಳಿಗೆ ಅಗತ್ಯವಾದ ಅನುದಾನವನ್ನು ಮುಂದುವರಿಸುವ ನಿರೀಕ್ಷೆ ಇದೆ.

  2. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ

    • ರೈತರ ಆದಾಯ ಹೆಚ್ಚಿಸುವ ಯೋಜನೆಗಳು

    • ನೀರಾವರಿ, ಬೆಳೆ ವಿಮೆ ಮತ್ತು ಕೃಷಿ ಮೂಲಸೌಕರ್ಯ ಅಭಿವೃದ್ಧಿ

  3. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ

    • ಸರ್ಕಾರಿ ಶಾಲೆ–ಕಾಲೇಜುಗಳ ಗುಣಮಟ್ಟ ಸುಧಾರಣೆ

    • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳು

  4. ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕೆ

    • ಯುವಕರಿಗೆ ಉದ್ಯೋಗ ಅವಕಾಶಗಳು

    • ಸ್ಟಾರ್ಟ್‌ಅಪ್‌ಗಳು, MSMEಗಳಿಗೆ ಪ್ರೋತ್ಸಾಹ

  5. ಮಹಿಳೆ ಮತ್ತು ದುರ್ಬಲ ವರ್ಗಗಳ ಕಲ್ಯಾಣ

    • ಮಹಿಳಾ ಸ್ವಾವಲಂಬನೆ

    • ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗಾಗಿ ವಿಶೇಷ ಕಾರ್ಯಕ್ರಮಗಳು

  6. ಮೂಲಸೌಕರ್ಯ ಅಭಿವೃದ್ಧಿ

    • ರಸ್ತೆ, ಸಾರಿಗೆ, ನಗರಾಭಿವೃದ್ಧಿ

    • ಬೆಂಗಳೂರು ಮತ್ತು ಇತರ ನಗರಗಳ ಅಭಿವೃದ್ಧಿಗೆ ಯೋಜನೆಗಳು