Telegram Join My Telegram WhatsApp Join My WhatsApp

40 ವರ್ಷ ವಯಸ್ಸಾಗಿದ್ದರೂ ಸಹ ಸಿಗುತ್ತೆ ರಾಜ್ಯ ಸರ್ಕಾರಿ ಕೆಲಸ.

ಕರ್ನಾಟಕ ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿ ಅಡಿ ನೇಮಕಾತಿಗೆ ಸಂಬಂಧಿಸಿದಂತೆ 2027ರ ಡಿಸೆಂಬರ್ 31 ರವರೆಗೆ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ವನ್ನು ಅನ್ವಯಿಸಿ ಎಲ್ಲ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಕ್ರಮದಿಂದಾಗಿ ಸಾಮಾನ್ಯ ವರ್ಗಕ್ಕೆ ಅರ್ಜಿ ಸಲ್ಲಿಸಲು ಈಗಿರುವ 35 ವರ್ಷಗಳ ಗರಿಷ್ಠ ವಯೋಮಿತಿ 40 ವರ್ಷಕ್ಕೆ, ಹಿಂದುಳಿದ ವರ್ಗಗಳಿಗೆ ಇರುವ 38 ವರ್ಷಗಳ ವಯೋಮಿತಿ 43 ವರ್ಷಗಳಿಗೆ ಹಾಗು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಇರುವ 40 ವರ್ಷಗಳ ವಯೋಮಿತಿಯನ್ನ 45 ವರ್ಷಗಳಿಗೆ ವಿಸ್ತರಣೆಯಾಗಲಿದೆ. 

ಅಲ್ಲದೆ ಈ ವಯೋಮಿತಿ ಸಡಿಲಿಕೆಯು 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗುವ ನೇಮಕಾತಿ ಅಧಿಸೂಚನೆಗೆ ಮಾತ್ರ ಅನ್ವಯವಾಗಲಿದೆ.

ಒಳ ಮೀಸಲಾತಿ ಸೇರಿ ಇನ್ನಿತರ ಕಾರಣಗಳಿಂದ ಕೆಲ ವರ್ಷಗಳಿಂದ ನೇಮಕಾತಿ ವಿಳಂಬವಾಗಿದೆ. ಆದ್ದರಿಂದ ಉದ್ಯೋಗಾಂಕ್ಷಿಗಳಿಗೆ ವಯೋಮಿತಿ ಮೀರಿದ್ದು ಅವರು ಸರ್ಕಾರಿ ಉದ್ಯೋಗದಿಂದ ವಂಚಿತರಾಗುವಂತಾಗಿದೆ. ಹೀಗಾಗಿ ವಯೋಮಿತಿಯನ್ನು ಸಡಿಲಗೊಳಿಸುವಂತೆ ಆಗ್ರಹಿಸಲಾಗಿತ್ತು. 

ಈ ಹಿನ್ನೆಲೆಯಲ್ಲಿ 2025ರ ಸೆಪ್ಟೆಂಬರ್ 29 ರಂದು ವಯೋಮಿತಿಯನ್ನ 3 ವರ್ಷ ಸಡಿಲಿಕೆ ಮಾಡಿ ಆದೇಶಿಸಲಾಗಿತ್ತು. ಆದರೆ ವಯೋಮಿತಿ ಸಡಿಲಿಕೆಯನ್ನು 5 ವರ್ಷಗಳಿಗೆ ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡಗಳು ಬಂದಿದ್ದವು.ಅದನ್ನು ಮನಗಂಡು ಕಳೆದ ಸಚಿವ ಸಂಪುಟ ಸಭೆಯಲ್ಲಿ ಒಮ್ಮೆ ಅನ್ವಯಿಸಿ 5 ವರ್ಷಗಳಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿತ್ತು.ಈಗ ಆದೇಶಿಸಲಾಗಿದೆ.