ರೈಲ್ವೆ ಹುದ್ದೆಗಳ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಇದ್ದರು. ಸ್ಟೇಷನ್ ಮಾಸ್ಟರ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಾಗಿದೆ. (ಬಡ್ತಿ ಹುದ್ದೆ ಪರೀಕ್ಷೆಗಳಲ್ಲಿ ಕನ್ನಡವನ್ನು ಕೈ ಬಿಡಲಾಗಿದೆ)
2012 ರಿಂದ ರೈಲ್ವೆ ಇಲಾಖೆಯ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ಆದೇಶಿಸಲಾಗಿದೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ಆಯ್ಕೆಯಾದ ರೈಲ್ವೆ ನೌಕರರಿಗೆ ಈಗ ಇಲಾಖಾವಾರು ಆಂತರಿಕ ಪರೀಕ್ಷೆಯಲ್ಲಿ ಪ್ರಾದೇಶಿಕ ಭಾಷೆಗೆ ಅವಕಾಶ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕಂಪ್ಯೂಟರ್ನಲ್ಲಿ ವ್ಯವಸ್ಥೆ ಇಲ್ಲ ಎಂಬ ಕಾಯಂ ನೆಪ.
ರೈಲ್ವೆ ಪರೀಕ್ಷೆಗಳನ್ನ ರೈಲ್ವೆ ಬೋರ್ಡ್ ಗೈಡ್ಲೈನ್ನಂತೆ ಸಿಬಿಟಿ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ಮೂಲಕ ನಡೆಸಲಾಗುತ್ತಿದೆ. ಹೀಗಾಗಿ ಇಲ್ಲಿ ಇಂಗ್ಲಿಷ್ ಮತ್ತು ಹಿಂದಿ ಮಾತ್ರ ಬಳಸಲಾಗುತ್ತಿದೆ. ತಾಂತ್ರಿಕ ಕಾರಣದಿಂದ ಕನ್ನಡದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾತುಗಳು ಇಲಾಖೆಯಲ್ಲಿ ಕೇಳಿಬರುತ್ತಿವೆ. ಆದರೆ ಇದಕ್ಕೆ ಸರಿಯಾದ ತಂತ್ರಜ್ಞಾನ ಬಳಸಿ ಕನ್ನಡದಲ್ಲಿ ಪರೀಕ್ಷೆ ನಡೆಸಲು ಯಾವ ಪ್ರಯತ್ನವೂ ನಡೆದಿಲ್ಲ ಎಂಬುದು ವಿಷಾದನೀಯ.
ಸೇರಿಸಿದ ಕನ್ನಡ ಮತ್ತೆ ತೆಗೆದಿದ್ದು ಏಕೆ? ರೈಲ್ವೆ ಪರೀಕ್ಷಾರ್ಥಿಗಳ ಪ್ರಶ್ನೆ.
2025 ಅಕ್ಟೋಬರ್ 10 ರಂದು ಕರೆದಿದ್ದ ಕಂಟ್ರೋಲ್ ಪರೀಕ್ಷೆಯನ್ನು ಮೊದಲು ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ನಡೆಸುತ್ತೇವೆ ಎಂದು ಆದೇಶ ಹೊರಡಿಸಲಾಗಿತ್ತು. ಆದರೆ ಜನವರಿ 19 ರಂದು ಕನ್ನಡವನ್ನು ತೆಗೆದು ಹಾಕಲಾಗಿದೆ. RRC ಮತ್ತು RRBಯಲ್ಲಿ ಕನ್ನಡಕ್ಕೆ ಅವಕಾಶ ಕೊಟ್ಟು, ಬಡ್ತಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಯಲ್ಲಿ ಕನ್ನಡ ತೆಗೆಯುವುದು ನ್ಯಾಯ ಅನ್ಯಾಯಬಹುದು.ಕನ್ನಡ ರೈಲ್ವೆ ನೌಕರರ ಹಿಂದೆ ಪರೀಕ್ಷೆಯಲ್ಲಿ ಸೇರಿಸಿದ ಕನ್ನಡ ಭಾಷೆಯನ್ನು ಮತ್ತೆ ತೆಗೆದುಹಾಕಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.